ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು. ಜಿಲ್ಲಾಧ್ಯಂತ ಸಂಕಷ್ಟ ತಂದೊಡ್ಡಿದೆ. ಹೀಗಾಗಿ, ಜಿಲ್ಲೆಯ 12 ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶುಕ್ರವಾರವೂ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ.

ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ, ದಾಂಡೇಲಿ, ಯಲ್ಲಾಪುರ, ಮುಂಡಗೋಡ ಹಾಗೂ ಹಳಿಯಾಳ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ,ನಾಳೆ ಶುಕ್ರವಾರ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ರಜೆಯ ಆದೇಶ

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ,ಸಿದ್ದಾಪುರ, ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ, ಮುಂಡಗೋಡ ಹಾಗೂ ಹಳಿಯಾಳ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 19 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..

 

error: Content is protected !!