ನಾಳೆ ರವಿವಾರ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಹಡಪದ ಅಪ್ಪಣ್ಣ ಜಯಂತಿ ಉತ್ಸವ- ಸರ್ವರಿಗೂ ಆಮಂತ್ರಣ ಕೋರಿದ ರಾಜ್ಯಾಧ್ಯಕ್ಷ

ಮುಂಡಗೋಡ: ನಾಳೆ ರವಿವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯಮಟ್ಟದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಆಚರಿಸಿಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಮಾರಂಭದಲ್ಲಿ ಭಾಗಿಯಾಗಲಿದ್ದು, ರಾಜ್ಯದ ಹಡಪದ ಅಪ್ಪಣ್ಣವರ ಸಮಾಜದ ಬಾಂಧವರು ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಹಡಪದ ಅಪ್ಪಣ್ಣ ಸಮಾಜದ ರಾಜ್ಯಾಧ್ಯಕ್ಷ ಸಿದ್ದಪ್ಪ ಹಡಪದ ವನವಿ ಮಾಡಿದ್ದಾರೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರವಿವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ, ತಂಗಡಗಿಯ ಹಡಪದ ಅಪ್ಪಣ್ಣ ದೇವರ ಮಹಾಸಂಸ್ಥಾನ ಮಠದ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಮಹಾಸ್ವಾಮಿಗಳ ಸಾನಿಧ್ಯದಲ್ಲಿ, ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಅಲ್ಲದೇ ಸಮಾರಂಭದಲ್ಲಿ ಕೇಂದ್ರ ಸಚಿವರು ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ ಅಂತಾ ಸಿದ್ದಪ್ಪ ಹಡಪದ್ ಮಾಹಿತಿ ನೀಡಿದ್ದಾರೆ.

error: Content is protected !!