ಮಳಗಿ ಧರ್ಮಾ ಜಲಾಶಯದಲ್ಲಿ ಕೊಚ್ಚಿಕೊಂಡು ಹೋದ ಮೂಡಸಾಲಿಯ ಇಬ್ಬರು ಯುವಕರು, ಓರ್ವನ ರಕ್ಷಣೆ, ಮತ್ತೋರ್ವ ನಾಪತ್ತೆ..!


ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಜಲಾಶಯ ನೋಡಲು ಬಂದಿದ್ದ ಯುವಕನೋರ್ವ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ಮತ್ತೋರ್ವನನ್ನು ರಕ್ಷಣೆ ಮಾಡಿರೋ ಘಟನೆ ನಡೆದಿದೆ.

ಮುಂಡಗೋಡ ತಾಲೂಕಿನ ಮೂಡಸಾಲಿಯ
ಶ್ರೀನಾಥ್ ಸೋಮಶೇಖರ್ ಹರಿಜನ್ (20)
ಸದ್ಯ ಮಳಗಿ ಜಲಾಶಯದಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ ಅಂತಾ ಮಾಹಿತಿ ಲಭ್ಯವಾಗಿದೆ. ಕೊಚ್ಚಿಕೊಂಡು ಹೋಗುತ್ತಿದ್ದಾಗ ಮತ್ತೋರ್ವ ಯುವಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ಫೀರಪ್ಪ ಹರಿಜನ್(25) ರಕ್ಷಣೆಗೊಳಗಾದ ಯುವಕನಾಗಿದ್ದಾನೆ.

ಮಳಗಿ ಧರ್ಮಾ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ, ಮೂಡಸಾಲಿ ಗ್ರಾಮದಿಂದ ಆರು ಜನ ಸ್ನೇಹಿತರು ನೋಡಲು ಬಂದಿದ್ದರು. ಈ ವೇಳೆ ಜಲಾಶಯದ ಉಬ್ಬಿನ ಹತ್ತರಿ ಹೋದಾಗ ಏಕಾಏಕಿ ಇಬ್ಬರು ಯುವಕರು ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಅದ್ರಲ್ಲಿ, ಓರ್ವ ಯುವಕನನ್ನು ಸ್ಥಳೀಯರು ಬಚಾವ್ ಮಾಡಿದ್ದಾರೆ. ಆದ್ರೆ, ಶ್ರೀನಾಥ್ ಹರಿಜನ್ ನೀರಲ್ಲಿ ನಾಪತ್ತೆಯಾಗಿದ್ದಾನೆ.

ಸದ್ಯ, ಸ್ಥಳಕ್ಕೆ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್, ಪಿಎಸ್ಐ ಪರಶುರಾಮ್, ಕ್ರೈಂ ಪಿಎಸ್ಐ ಗುಡಗುಂಟಿ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ದೌಡಾಯಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಬಂದಿಳಿದಿದ್ದಾರೆ. ಯುವಕನ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!