ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು. ಜಿಲ್ಲಾಧ್ಯಂತ ಇನ್ನಿಲ್ಲದ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಗುರುವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ.
ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಗುರುವಾರ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಎಲ್ಲ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 25 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..