ಮಳಗಿ ಧರ್ಮಾ ಜಲಾಶಯ ಭರ್ತಿ: ಮಳಗಿ- ದಾಸನಕೊಪ್ಪ ರಸ್ತೆ ಜಲಾವೃತ..! ಸಂಚಾರ ಬಂದ್..!!


ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಜಲಾಶಯ ಭರ್ತಿಯಾಗಿದೆ. ಹೀಗಾಗಿ, ಜಲಾಶಯ ಉಬ್ಬು ಬಿದ್ದು, ಮಳಗಿ- ದಾಸನಕೊಪ್ಪ ರಸ್ತೆ ಜಲಾವೃತವಾಗಿದೆ. ಮಿನಿ ಬ್ರಿಡ್ಜ್ ಮೇಲೆ ಮೂರು ಅಡಿಗಳಷ್ಟು ನೀರು ಹರಿಯುತ್ತಿರೊ ಕಾರಣ ರಸ್ತೆ ಸಂಚಾರ ಸ್ಥಗಿತವಾದಂತಾಗಿದೆ.

ನಿರಂತರ ಮಳೆ ಹಿನ್ನೆಲೆಯಲ್ಲಿ ಧರ್ಮಾ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಹೀಗಾಗಿ, ಮಳಗಿ ಬನವಾಸಿ ರಸ್ತೆಯ ದಾಸನಕೊಪ್ಪ ಬಳಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಹೀಗಾಗಿ, ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಗಿದೆ.

 

error: Content is protected !!