ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅವಾಂತರ ಕಡಿಮೆಯಾಗಿಲ್ಲ. ಜಿಲ್ಲಾಧ್ಯಂತ ಇನ್ನಿಲ್ಲದ ಸಂಕಷ್ಟ ಸೃಷ್ಟಿಯಾಗಿದೆ. ಹೀಗಾಗಿ, ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ.
ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ, ಹಳಿಯಾಳ, ದಾಂಡೇಲಿ ಹಾಗೂ ಯಲ್ಲಾಪುರ, ಶಿರಸಿ ಹಾಗೂ ಸಿದ್ದಾಪುರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಶನಿವಾರ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಎಲ್ಲ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 27 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.
ಇಂದಿನ ಮಳೆಯ ಹಾನಿ ಇಷ್ಟು..!
ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 1 ಮನೆ ಸಂಪೂರ್ಣ ಹಾನಿ, 3 ಮನೆಗಳಿಗೆ ತೀವ್ರ ಹಾನಿ,49 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಕಾರವಾರದ 2 , ಕುಮಟಾ ಮತ್ತು ಅಂಕೋಲಾದ ತಲಾ 1 ಸೇರಿದಂತೆ ಒಟ್ಟು 4 ಕಾಳಜಿ ಕೇಂದ್ರಗಳಲ್ಲಿ 205 ಮಂದಿಗೆ ಆಶ್ರಯ ಕಲ್ಪಿಸಲಾಗಿದೆ.