ನಿರಂತರ ಮಳೆ ಹಿನ್ನೆಲೆಯಲ್ಲಿ, ಮುಂಡಗೋಡ ತಾಲೂಕಿನ ಯರೆಬೈಲು ಬೇಡ್ತಿ ಹಳ್ಳದಲ್ಲಿ ನೀರಿನ ಪ್ರಮಾಣ ಕೊಂಚ ಜಾಸ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಡಗೋಡ ತಹಶಿಲ್ದಾರ ಶಂಕರ್ ಗೌಡಿ ಹಾಗೂ ಜಿಪಂ ಇಂಜಿನಿಯರ್ ಪ್ರದೀಪ್ ಭಟ್ಟ ಯರೆಬೈಲಿನ ಹಳ್ಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡ್ರು.
ಇನ್ನು, ಸ್ಥಳೀಯರಿಗೆ ಈ ಬಗ್ಗೆ ಸೂಚನೆ ನೀಡಿದ ತಹಶೀಲ್ದಾರರು, ನೀರಿನ ಪ್ರಮಾಣ ಹೆಚ್ಚಾದರೆ ತಾಲೂಕಾಡಳಿತಕ್ಕೆ ಮಾಹಿತಿ ನೀಡುವಂತೆ ತಿಳಿಸಿದ್ರು. ದನಕರುಗಳನ್ನು ಹಳ್ಳದ ನೀರಲ್ಲಿ ಬಿಡದಂತೆ ಹಾಗೂ ಜನರು ಹಳ್ಳದಲ್ಲಿ ಇಳಿಯದಂತೆ ಸೂಚಿಸಿದ್ರು. ಸ್ಥಳೀಯ ಪಿಡಿಓ ಸೇರಿದಂತೆ ಹಲವರಿಗೆ ಎಚ್ಚರ ವಹಿಸಲು ಖಡಕ್ ಸೂಚನೆ ನೀಡಿದ್ರು.