ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಧ್ಯಂತ ಅವಾಂತರಗಳು ಸೃಷ್ಟಿಯಾಗಿವೆ. ಹೀಗಾಗಿ, ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ಬುಧವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ.
ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ಇಂದು ಬುಧವಾರ ದಿನಾಂಕ: 31 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.