ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ಗುರುವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ.
ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ಇಂದು ಗುರುವಾರ ಅಗಷ್ಟ 1 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.