ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ.
ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ, ದಾಂಡೇಲಿ, ಶಿರಸಿ ಹಾಗೂ ಸಿದ್ದಾಪುರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಶನಿವಾರ ಅಗಷ್ಟ 3 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇಂದಿನ ಮಳೆಯ ಹಾನಿ..!
ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 4 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಕಾರವಾರದ 2, ಅಂಕೋಲ ದ 1, ಹೊನ್ನಾವರ ದ 9 ಮತ್ತು ಕುಮಟಾ ದ 2 ಸೇರಿದಂತೆ ಒಟ್ಟು 14 ಕಾಳಜಿ ಕೇಂದ್ರಗಳಲ್ಲಿ 503 ಮಂದಿಗೆ ಆಶ್ರಯ ಕಲ್ಪಿಸಲಾಗಿದೆ.