ಕಾರವಾರದ ಕೋಡಿಭಾಗನಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರೋ ಸೇತುವೆ ಕುಸಿದು ಬಿದ್ದಿದೆ. ಪರಿಣಾಮ ಅದೇ ವೇಳೆ ಸಂಚರಿಸುತ್ತಿದ್ದ ಲಾರಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಹೀಗಾಗಿ, ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರಿಂದ ಲಾರಿ ಚಾಲಕನ ರಕ್ಷಣೆ ಮಾಡಲಾಗಿದೆ.
ಅಂದಹಾಗೆ, ಕಾರವಾರ ನಗರದ ಕೋಡಿಭಾಗ್ ನಲ್ಲಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಿರ್ಮಿಸಿದ್ದ ಸುಮಾರು 50 ವರ್ಷ ಹಳೆಯದಾದ ಸೇತುವೆ ಏಕಾ ಏಕಿ ಕುಸಿದು ಬಿದ್ದಿದೆ.
ಸದ್ಯ ನದಿಗೆ ನಿರ್ಮಿಸಿರುವ ಹೊಸ ಸೇತುವೆಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಪೊಲೀಸರು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.