ಶಿರಸಿ ಸಮೀಪ ಸ್ಕೂಟಿ, ಕಾರು ಅಪಘಾತ, ನಂದಿಗಟ್ಟಾ ಮೂಲದ ಗ್ರಾಪಂ ಕಾರ್ಯದರ್ಶಿ ದಾರುಣ ಸಾವು..!

ಮುಂಡಗೋಡ: ತಾಲೂಕಿನ ನಂದಿಗಟ್ಟಾದ ಮಾರುತಿ ರಾಧಾಪುರ ಅಪಘಾತದಲ್ಲಿ ಮೃತಪಟ್ಟಿದ್ದಾರೆ‌. ಶಿರಸಿ ಸಮೀಪದ ಕೋಳಿಗಾರ್ ಬಳಿ ನಡೆದ ಸ್ಕೂಟಿ ಹಾಗೂ ಕಾರ್ ನಡುವಿನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.

ಶಿರಸಿ ತಾಲೂಕಿನ ಸಾಲ್ಕಣಿ ಗ್ರಾಮ ಪಂಚಾಯತಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಾರುತಿ ರಾದಾಪುರ, ಗುರುವಾರ ಬೆಳಿಗ್ಗೆ ಕರ್ತವ್ಯಕ್ಕಾಗಿ ಆಫೀಸಿಗೆ ತೆರಳುತ್ತಿದ್ದ ವೇಳೆ, ಕೋಳಿಗಾರ ಸಮೀಪ ಸ್ಕೂಟಿ ಹಾಗು ಕಾರು ಮುಖಾಮುಕಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಶಿರಸಿ ಆಸ್ಪತ್ರೆಗೆ ದಾಖಲಿಸಲು ರವಾನಿಸುವ ಸಂದರ್ಭದಲ್ಲೇ ದಾರಿ ಮದ್ಯೆ ಅಸು ನೀಗಿದ್ದಾರೆ.

error: Content is protected !!