ಕಾರವಾರ: ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪೋಲಿಸ್ ಇಲಾಖೆ ಹಾಗೂ ಕಾರವಾರ ಬೈಸಿಕಲ್ ಕ್ಲಬ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಭಾರತದ 78ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ “ಹರ್ ಘರ್ ತಿರಂಗ” ಕಾರ್ಯಕ್ರಮದ ಅಡಿಯಲ್ಲಿ “ಸೈಕ್ಲೊತಾನ್” ಕಾರ್ಯಕ್ರಮ ಕಾರವಾರದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಾರಂಭವಾದ “ಸೈಕ್ಲೊತಾನ್” ಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಚಾಲನೆ ನೀಡಿದ್ರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಸೇರಿದಂತೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

“ಸೈಕ್ಲೊತಾನ್” ಕಾರ್ಯಕ್ರಮದಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು, ಕಾರವಾರ್ ಬೈಸಿಕಲ್ ಕ್ಲಬ್ ನ ಸದಸ್ಯರು ಸೇರಿದಂತೆ ಹಲವರು ಭಾಗಿಯಾಗಿದ್ದರು‌.

error: Content is protected !!