ಗದಗ: ಸಾರಿಗೆ ಬಸ್ ಮತ್ತು ಕಾರ್ ನಡುವೆ ಭಿಕರ ಅಪಘಾತ ನಡೆದಿದೆ. ಪರಿಣಾಮ ಕಾರನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.

ಗದಗ ಜಿಲ್ಲೆ ನರಗುಂದ ತಾಲೂಕು ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ (45),
ಮಗಳು ಐಶ್ವರ್ಯ (16), ಮಗ ವಿಜಯ(12) ಸಾವು ಕಂಡಿದ್ದಾರೆ.

ಇಳಕಲ್ ನಿಂದ ಹುಬ್ಬಳ್ಳಿ ಗೆ ಹೊರಟ್ಟಿದ್ದ ಸಾರಿಗೆ ಬಸ್, ಹಾವೇರಿಯಿಂದ ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ‌.

ಮೃತರು ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟ್ಟಿದ್ದಾಗ ಘಟನೆ ನಡೆದಿದೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

error: Content is protected !!