ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ತಾಲೂಕಿನ ಕಲಕೇರಿ ಪ್ಲಾಟ್ ಹೊನ್ನಿಕೊಪ್ಪದಲ್ಲಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರಿಗೆ ಗಂಭೀರ ಗಾಯವಾಗಿದೆ..

ಕಲಕೇರಿ ಪ್ಲಾಟ್ ಹೊನ್ನಿಕೊಪ್ಪದ ಅಟೆಲ್ ಸಾಬ್ ಅತ್ತಾರ್ ಎಂಬುವವರಿಗೆ ಸೇರಿದ ಮನೆಯ ಗೋಡೆ ನಿರಂತರ ಮಳೆಯ ಕಾರಣಕ್ಕೆ ಕುಸಿದು ಬಿದ್ದಿದೆ. ಪರಿಣಾಮ ಪಕ್ಕದ ಮನೆಯ ಸಾತವ್ವ ಭೀಮಣ್ಣ ಬೆಂಗಳೂರ (50) ಎಂಬುವ ಮಹಿಳೆಗೆ ಗಂಭೀರ ಗಾಯವಾಗಿದೆ.

ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು, ಸದ್ಯ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಯ ಕಿಮ್ಸ್ ಗೆ ರವಾನಿಸಲಾಗಿದೆ. ಕಂದಾಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.

error: Content is protected !!