ಹಾವೇರಿ; ಊಟ ಮಾಡಿ ರಸ್ತೆಯ ಪಕ್ಕದಲ್ಲಿ ಮಲಗಿದವರ ಮೇಲೆ ರೋಡ್ ರೂಲರ್ ಹರಿದು ಇಬ್ಬರು ಕಾರ್ಮಿಕರ ಸಾವು ಕಂಡ ದಾರುಣ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರಿನಲ್ಲಿ ನಡೆದಿದೆ.

ಸಿದ್ದು(24), ಪ್ರೀತಮ್ ( 25) ರೂಲರ್ ಅಡಿಗೆ ಸಿಲುಕಿ ಸಾವು ಕಂಡ ದುರ್ಧೈವಿಗಳು. ಮೊಟೇಬೆನ್ನೂರಿನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಕೆಲಸಕ್ಕೆ ಬಂದಿದ್ದ ಕಾರ್ಮಿಕರು, ಮಾಧ್ಯಾಹ್ನದ ವೇಳೆ ಊಟ ಮಾಡಿ ರೂಲರ್ ಪಕ್ಕದಲ್ಲಿ ಮಲಗಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಸ್ಥಳಕ್ಕೆ ಬ್ಯಾಡಗಿ ಪೊಲೀಸರು ಬೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

error: Content is protected !!