ಮುಂಡಗೋಡ : ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಲ್ಮಾ ಕಿರಣ ಶೇರಖಾನೆ ಅವರನ್ನು ನೇಮಕ ಮಾಡಲಾಗಿದೆ.
ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಅಲ್ಕಾ ಲಂಬಾ ಅವರು ಹಾಗೂ ಡಾ.ಬಿ.ಪುಷ್ಪ ಅಮರನಾಥ, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಇವರ ಆದೇಶದ ಮೇರೆಗೆ ಸಲ್ಮಾ ಕಿರಣ ಶೇರಖಾನೆ ಅವರನ್ನು ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ನೇಮಕಾತಿ ಮಾಡಲಾಗಿದೆ. ಅಖಿಲ ಭಾರತದ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳು ಹಾಗೂ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಹಾಗೂ ಪಕ್ಷದ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಅವರ ಮಾರ್ಗದರ್ಶನದಲ್ಲಿ ಮಹಿಳೆಯರನ್ನು ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ದೇಶದ ಆಡಳಿತ ಮುಖ್ಯವಾಹಿನಿಗೆ ತರುವ ಹಾಗೂ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ದುಡಿಯುತ್ತಿರೆಂದು ನಂಬಿ ತಮಗೆ ಈ ಜವಾಬ್ದಾರಿಯನ್ನು ವಹಿಸಿದ್ದೇವೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸುಜಾತಾ ರ್ ಅವರು ಸಲ್ಮಾ ಶೇರಖಾನೆ ಅವರಿಗೆ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.