ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!

ಮುಂಡಗೋಡ; ಕರಡಿ ದಾಳಿಯಿಂದ ಯುವಕನೋರ್ವನಿಗೆ ಗಂಭೀರ ಗಾಯವಾದ ಘಟನೆ, ಮುಂಡಗೋಡ ತಾಲೂಕಿನ ಕಾತೂರ ಪಂಚಾಯತ್ ವ್ಯಾಪ್ತಿಯ ಸಿಂಗನಹಳ್ಳಿ ಹುಲಿಹೊಂಡ ಗ್ರಾಮದಲ್ಲಿ ನಡೆದಿದೆ. ವಿಪರ್ಯಾಸ ಅಂದ್ರೆ ಐದು ದಿನಗಳ ಹಿಂದೆ ನಡೆದಿದೆ ಎನ್ನಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ರಾಮು ಜಾನು ಕೋಕರೆ(31) ಕರಡಿ ದಾಳಿಗೊಳಗಾದ ವ್ಯಕ್ತಿಯಾಗಿದ್ದಾನೆ. ಕಳೆದ ಐದು ದಿನಗಳ ಹಿಂದೆ ಕರಡಿ ದಾಳಿಯಾಗಿತ್ತು. ಈ ವೇಳೆ ವ್ಯಕ್ತಿಯ ತಲೆಗೆ ಕಚ್ಚಿ ತೀವ್ರ ಗಾಯಗೊಳಿಸಿತ್ತು. ದುರಂತ ಅಂದ್ರೆ ಇಷ್ಟೊಂದು ಗಾಯವಾಗಿದ್ರೂ ಈ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಸಿಗಲೇ ಇಲ್ಲವೆನೋ ಅನ್ನೋ ಅಮುಮಾನ ಶುರುವಾಗಿದೆ. ಈಗಾಗಲೇ ತಾಲೂಕಾಸ್ಪತ್ರಗೆ ಗಾಯಾಳು ವ್ಯಕ್ತಿಯನ್ನು ಚಿಕಿತ್ಸೆಗೆ ದಾಕಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ, ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ.

ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌.

error: Content is protected !!