ಹುಬ್ಬಳ್ಳಿಯ ಯುವಕನೋರ್ವನ ಬರ್ಬರ ಹತ್ಯೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಸುದೀಪ್, ಕಿರಣ್ ಪೊಲೀಸರ ಗುಂಡು ತಿಂದ ಆರೋಪಿಗಳಾಗಿದ್ದಾರೆ.
ಆಶೋಕ ನಗರ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಶಿವರಾಜ್ ಕಮ್ಮಾರ ಎಂಬ ಯುವಕನನ್ನು ಕೊಲೆ ಮಾಡಿ ಪರಾರಿಯಾಗಿದ್ದರು. ಆದ್ರೆ ಹತ್ಯೆ ನಡೆದ 6 ಗಂಟೆಯಲ್ಲಿ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಪೊಲೀಸರು ಬಂಧಿಸಲು ತೆರಳಿದಾಗ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಹಂಕತರ ಮೇಲೆ ಫೈರಿಂಗ್ ಮಾಡಿದ್ದು, ಆರೋಪಿಗಳಾದ ಸುದೀಪ್ ಮತ್ತು ಕಿರಣ್ ಕಾಲಿಗೆ ಗುಂಡು ತಗುಲಿದ್ದರಿಂದ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಿಮ್ಸ್ ಆಸ್ಪತ್ರೆಗೆ ಕಮಿಷನರ್ ಎನ್. ಶಶಿಕುಮಾರ್ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಲಿದ್ದಾರೆ.