ಹಾವೇರಿ ಜಿಲ್ಲೆಯಾದ್ಯಂತ ರಾತ್ರಿ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದ ಹಾವೇರಿ ನಗರದಲ್ಲಿ ಇರುವ ಹತ್ತಾರು ರಸ್ತೆಗಳು ಕೆರೆಯಂತಾಗಿವೆ. ಹೀಗಾಗಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಾಲಕನೋರ್ವ ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಘಟನೆ ನಡೆದಿದೆ.
ಹಾವೇರಿ ಎಸ್.ಪಿ ಕಚೇರಿ ಮುಂಭಾಗದಲ್ಲಿಯೇ ಘಟನೆ ನಡೆದಿದ್ದು, ನೀವೆದನ್ ಬಸವರಾಜ್ ಗುಡಗೇರಿ (12) ಕೊಚ್ಚಿ ಹೋದ ಬಾಲಕನಾಗಿದ್ದಾನೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದಾರೆ. ಬಾಲಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಬಾಲಕನ ಸಂಬಂಧಿಗಳಿಂದ ಸ್ಥಳದಲ್ಲಿ ಪ್ರತಿಭಟನೆ ಕೂಡ ನಡೆದಿದೆ.
ಬಾಲಕನ ತಾಯಿ ತೀವ್ರ ಅಸ್ವಸ್ಥಳಾಗಿದ್ದಾಳೆ. ಹೀಗಾಗಿ ಅಂಬ್ಯುಲೆನ್ಸ್ ಮೂಲಕ ಅವ್ರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಬಾಲಕನ ಕುಟುಂಬಸ್ಥರ ಆಕ್ರಂಧನ ಮುಗಿಲಿ ಮುಟ್ಟಿದೆ. ಸ್ಥಳಕ್ಕೆ ಎಸ್ಪಿ ಅಂಶುಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಾಲಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.