ಬೆಂಗಳೂರು: ಗ್ರಾಮ ಪಂಚಾಯತಿ ಉಪಚುನಾವಣೆಗೆ ಮುಹೂರ್ತ ಪಿಕ್ಸ್ ಆಗಿದೆ. ನವೆಂಬರ್ 23 ರಂದು ಉಪಚುನಾವಣೆ ನಡೆಸಲು ದಿನಾಂಕ್ ಫಿಕ್ಸ್ ಆಗಿದೆ. ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿಯ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ದಿನಾಂಕ ಘೋಷಣೆಯಾಗಿದೆ.
ಅಂದಹಾಗೆ, ಹುನಗುಂದ ಗ್ರಾಮ ಪಂಚಾಯತಿ ವಾರ್ಡ್ ನಂಬರ್ 1 ರ ಸದಸ್ಯೆ ಯಲ್ಲವ್ವ ಇಟ್ಲಾಪುರ ನಿಧನದಿಂದ ತೆರವಾಗಿರೋ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ.
ವಿವರ ಇಲ್ಲಿದೆ..!
ದಿನಾಂಕ 06-11-2024 (ಬುಧವಾರ)
ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕ ಮತ್ತು ದಿನವಾಗಿದೆ.
12-11-2024 (ಮಂಗಳವಾರ) ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
13-11-2024 (ಬುಧವಾರ)
ನಾಮಪತ್ರಗಳನ್ನು ಪರಿಶೀಲಿಸುವ ದಿನವಾಗಿದೆ.
15-11-2024 (ಶುಕ್ರವಾರ) ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ.
23-11-2024 ಶನಿವಾರ, ಮತದಾನ ಅವಶ್ಯವಿದ್ದರೆ, ಮತದಾನವನ್ನು ನಡೆಸಬೇಕಾದ ದಿನವಾಗಿದೆ. ಅವತ್ತು ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ ನಡೆಯಲಿದೆ.
ಮರು ಮತದಾನ ಅವಶ್ಯವಿದ್ದರೆ 25-11-2024 (ಸೋಮವಾರ) ರಂದು ಮತದಾನವನ್ನು ನಡೆಸಬಹುದಾಗಿದೆ. ಆ ದಿನ ಬೆಳಿಗ್ಗೆ 7-00 ಗಂಟೆಯಿಂದ ಸಂಜೆ 5-00 ಗಂಟೆಯವರೆಗೆ ಮತದಾನ ನಡೆಯಲಿದೆ.
26-11-2024 (ಮಂಗಳವಾರ)ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಅವತ್ತು ಬೆಳಿಗ್ಗೆ 8-00 ಗಂಟೆಯಿಂದ ತಾಲ್ಲೂಕು ಕೇಂದ್ರಗಳಲ್ಲಿ, ಮತ ಎಣಿಕೆ ನಡೆಯಲಿದೆ..
26-11-2024, ಮಂಗಳವಾರ
ಚುನಾವಣೆಯ ಪ್ರಕ್ರಿಯೆಗಳು ಮುಕ್ತಾಯಗೊಳ್ಳಲಿದೆ ಅಂತಾ ಚುನಾವಣಾ ಆಯೋಗ ಮಾಹಿತಿ ನೀಡಿದೆ.