ಹಾವೇರಿ : ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮೊದಲ ದಿನ ಮೂರು ಅಭ್ಯರ್ಥಿಗಳಿಂದ ನಾಲ್ಕು ನಾಮಪತ್ರಗಳು ಸಲ್ಲಿಕೆಯಾಗಿವೆ.
ಹಿಂದೂಸ್ತಾನ ಜನತಾ ಪಕ್ಷದಿಂದ ತಳವಾರ ಶಿವಕುಮಾರ ಎರಡು, ಕರ್ನಾಟಕ ರಾಷ್ಟ್ರ ಸಮಿತಿಯಿಂದ ರವಿ ಕೃಷ್ಣಾರೆಡ್ಡಿ ಹಾಗೂ ಸೋಸಿಯಾಲಿಸ್ಟ ಪಾರ್ಟಿ (ಇಂಡಿಯಾ)ಯಿಂದ ಖಾಜಾಮೋಹಿದ್ದಿನ ಗುಡಗೇರಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಶಿಗ್ಗಾವಿ ತಹಶೀಲ್ದಾರ ಕಚೇರಿಯಲ್ಲಿ ಶುಕ್ರವಾರ ಸವಣೂರ ಉಪ ವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ಮಹ್ಮದ್ ಖಿಜರ್ ಅವರಿಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ತಹಶೀಲ್ದಾರ ಹಾಗೂ ಸಹಾಯಕ ಚುನಾವಣಾಧಿಕಾರಿ ಸಂತೋಷ ಹಿರೇಮಠ ಅವರು ಉಪಸ್ಥಿತರಿದ್ದರು.
ಅ.25 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಅ.28ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ ಹಾಗೂ ಅ.30 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ.