ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ


ಮುಂಡಗೋಡ ತಾಲೂಕಿನ ಸಾಲಗಾವಿಯಲ್ಲಿ ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಸಾಲಗಾವಿಯ ತುಂಬರ್ಗಿ ರಸ್ತೆಯಲ್ಲಿರೋ ಗೌಡನಕಟ್ಟಿ ಕೆರೆಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬಾಲಕನ ಶವ ಹೊರ ತೆಗೆದಿದ್ದಾರೆ.

ಅಂದಹಾಗೆ, ಸಾಲಗಾಂವ್ ಗ್ರಾಮದ ಪರಶುರಾಮ ಹನ್ಮಂತಪ್ಪ ದುರಮುರ್ಗಿ (15) ಎಂಬುವ ಒಂಬತ್ತನೇ ತರಗತಿ ವಿದ್ಯಾರ್ಥಿಯೇ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈತ ನಿನ್ನೆ ಮದ್ಯಾಹ್ನದಿಂದಲೇ ಮನೆಯಿಂದ ಹೊರಟವನು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ, ಗಾಬರಿಗೊಂಡ ಪೋಷಕರು ಎಲ್ಲ ಕಡೆ ಹುಡುಕಿದ್ದಾರೆ. ಸಿಗದೇ ಇದ್ದಾಗ ರಾತ್ರಿ ಮುಂಡಗೋಡ ಠಾಣೆಗೆ ಬಂದು ಕಾಣೆಯಾಗಿರೋ ಬಗ್ಗೆ ದೂರು ನೀಡಿದ್ದರು

ಹೀಗಾಗಿ, ಬೆಳ್ಳಂ ಬೆಳಿಗ್ಗೆಯೇ ಪಿಎಸ್ಐ ಪರಶುರಾಮ್ ಮಿರ್ಜಿಗಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದರು. ಕಾಣೆಯಾಗಿದ್ದ ಬಾಲಕನ ಪತ್ತೆಗೆ ಮುಂದಾಗಿ, ತುಂಬರ್ಗಿ ರಸ್ತೆಯಲ್ಲಿರೊ ಗೌಡನಕಟ್ಟಿ ಕೆರೆಯ ದಂಡೆಯ ಮೇಲೆ ಬಾಲಕನ ಬಟ್ಟೆ ಬರೆಗಳು ಪತ್ತೆಯಾಗಿದ್ದವು. ಹೀಗಾಗಿ, ಅಗ್ನಿಶಾಮಕ ಸಿಬ್ಬಂದಿ ಬಾಲಕನ ಶೋಧ ಕಾರ್ಯ ನಡೆಸಿ ಶವ ಪತ್ತೆ ಹಚ್ಚಿದ್ದಾರೆ.

ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!