ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲ, ಕುಮಟಾ,ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಮುಂಡಗೋಡ, ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ತಾಲೂಕುಗಳ 15 ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನ ತುಂಬಲು ಉಪ ಚುನಾವಣೆ ಜರುಗಿಸುವ ಕುರಿತು ಚುನಾವಣಾ ವೇಳಾ ಪಟ್ಟಿಯನ್ನು ಹೊರಡಿಸಲಾಗಿದೆ.
ನವೆಂಬರ್ 6 ರಂದು ಅಂದ್ರೆ ಬುಧವಾರ, ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು, ನ. 12 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ, ನ.13 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.15 ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕವಾಗಿದೆ.
ಮತದಾನದ ಅವಶ್ಯವಿದ್ದಲ್ಲಿ,ನ.23 ರಂದು ಬೆಳಗ್ಗೆ 7 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನದ ಅವಶ್ಯವಿದ್ದಲ್ಲಿ ನ. 25 ರಂದು ನಡೆಸಲಾಗುವುದು. ನ.26 ರಂದು ಬೆ.8 ಗಂಟೆಗೆ ಮತಗಳ ಎಣಿಕೆ ತಾಲ್ಲೂಕಿನ ಕೇಂದ್ರ ಸ್ಥಳದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.