ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಜಯ ದಾಖಲಿಸಿದ ಹಿನ್ನೆಲೆಯಲ್ಲಿ ಇವತ್ತು ಸವಣೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಸವಣೂರಿನ ತಾಲೂಕಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರೋ ಬೃಹತ್ ಅಭಿನಂದನಾ ಸಮಾರಂಭಸಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಬಹುಶಃ, ಶಿಗ್ಗಾವಿ ಕ್ಷೇತ್ರಕ್ಕಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಗಿಫ್ಟ್ ಕೊಡ್ತಾರಾ..? ಅನ್ನೋ ಭರವಸೆ ಯಲ್ಲಿದ್ದಾರೆ ಜನ.
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಸವಣೂರು ಪಟ್ಟಣಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಗ್ಗಾವಿ ಕ್ಷೇತ್ರದ ಜನತೆ ಕಾಂಗ್ರೆಸ್‌ಗೆ ಆಶೀರ್ವಾದ ಮಾಡಿದ ಹಿನ್ನೆಲೆಯಲ್ಲಿ, ಕೃತಜ್ಞತೆ ಸಲ್ಲಿಸಲಿದ್ದಾರೆ.
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ನೀಡಿದ ಕ್ಷೇತ್ರದ ಎಲ್ಲ ಮತದಾರರಿಗೆ ಅಭಿನಂದನಾ ಸಮಾವೇಶ ಆಯೋಜನೆ ಮಾಡಲಾಗಿದ್ದು, ಸವಣೂರಿನ ತಾಲೂಕಾ ಕ್ರೀಡಾಂಗಣದಲ್ಲಿ ಸಾಯಂಕಾಲ ನಾಲ್ಕು ಗಂಟೆಗೆ ಕೃತಜ್ಞತಾ ಸಮಾವೇಶ ನಡೆಯಲಿದೆ.
ಇದೇ ಬಹಿರಂಗ ಸಮಾವೇಶದಲ್ಲಿ ಭಾಗಿಯಾಗಿ ಸಿಎಂ ಸಿದ್ದರಾಮಯ್ಯ ಕ್ಷೇತ್ರಕ್ಕೆ ಬಂಪರ ಅನುದಾನ ನೀಡ್ತಾರಾ ಅನ್ನೊ ಕುತೂಹಲ ಹೆಚ್ಚಾಗಿದ್ದು ಕ್ಷೇತ್ರದ ಜನ ಭರವಸೆಯಲ್ಲಿದ್ದಾರೆ.
ಸಿಎಂ ಸಿದ್ದರಾಮಯ್ಯನವರ ಜೊತೆಗೆ ಡಿಸಿಎಂ ಡಿ.ಕೆ.ಶಿವಕುಮಾರ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ಕಾರ್ಯದರ್ಶಿ ಮಯೂರ ಜಯಕುಮಾರ್, ಸಚಿವರುಗಳಾದ ಸತೀಶ್ ಜಾರಕಿಹೊಳಿ, ಶಿವಾನಂದ ಪಾಟೀಲ್, ಹೆಚ್.ಕೆ.ಪಾಟೀಲ್, ಈಶ್ವರ ಖಂಡ್ರೆ ಸೇರಿದಂತೆ ಅನೇಕರು ವೇದಿಕೆಯಲ್ಲಿ ಇರಲಿದ್ದಾರೆ.
ಸಂಡೂರನಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಲಿರೋ ಸಿಎಂ, ಹುಬ್ಬಳ್ಳಿಯಿಂದ ರಸ್ತೆ ಮೂಲಕ ಸವಣೂರಿಗೆ ಬರಲಿದ್ದಾರೆ. ನಾಲ್ಕು ಗಂಟೆಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ರಸ್ತೆ ಮೂಲಕ ಹುಬ್ಬಳ್ಳಿಗೆ ವಾಪಸ್ಸಾಗಲಿದ್ದು, ಹುಬ್ಬಳ್ಳಿಯಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ತೆರಳಿಲಿದ್ದಾರೆ.