ಹುಬ್ಬಳ್ಳಿ ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು..!

ಹುಬ್ಬಳ್ಳಿಯಲ್ಲಿ ನಡೆದಿದ್ದ ಸಿಲಿಂಡರ್ ಬ್ಲಾಸ್ಟ್ ಆಗಿ 9 ಜನ ಗಂಭೀರವಾಗಿದ್ದ ಪ್ರಕರಣದಲ್ಲಿ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮಾಲಾಧಾರಿಗಳು ಸಾವು ಕಂಡಿದ್ದಾರೆ.

ನಿಜನಿಂಗಪ್ಪ ಮಲ್ಲಪ್ಪ ಬೇಪೂರು (58),
ಸಂಜಯ ಪ್ರಕಾಶ್ ಸವದತ್ತಿ (17) ಸಾವು ಕಂಡಿರೋ ಅಯ್ಯಪ್ಪ ಮಾಲಾಧಾರಿಗಳು.

ಹುಬ್ಬಳ್ಳಿಯ ಅಚ್ಚವನ ಕಾಲೋನಿಯ ಈಶ್ವರ ದೇವಾಲಯದಲ್ಲಿ ಮೂರು ದಿನಗಳ ಹಿಂದೆ ಸಿಲಿಂಡರ್ ಸೋರಿಕೆ ಯಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಒಂಬತ್ತು ಜನ ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು.

ಗಾಯಗೊಂಡಿದ್ದ ಒಟ್ಟೂ ಒಂಬತ್ತು ಜನ ಅಯ್ಯಪ್ಪ ಮಾಲಾಧಾರಿಗಳಿಗೆ, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕಳೆದ‌ ಮೂರು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು..

error: Content is protected !!