ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ನಡೆಯಬಾರದ ಭಾರಿ ಘಟನೆಯೊಂದು ನಡೆದುಹೋಗಿದೆ. ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಅಮಾನುಷವಾಗಿ ಕೊಲೆ ಮಾಡಿದ್ದಾರೆ ಪಾಪಿಗಳು. ಇಡೀ ಗ್ರಾಮವೇ ಈ ಘಟನೆಯಿಂದ ಅಕ್ಷರಶಃ ಥರಗುಟ್ಟಿ ಹೋಗಿದೆ.
ಪ್ರಕಾಶ ಓಲೇಕಾರ (48) ಹತ್ಯೆಯಾದ ದುರ್ದೈವಿಯಾಗಿದ್ದಾನೆ. ಬೇರೆಯವರ ಪತ್ನಿಯೊಂದಿಗೆ ಅಕ್ರಮ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ,
ಬಸವರಾಜನ ಮನೆಗೆ ಹೋದಾಗ ಹತ್ತಕ್ಕೂ ಅಧಿಕ ಜನರಿಂದ ಹತ್ಯೆ ನಡೆದಿದೆ ಅನ್ನೋ ಆರೋಪ ಕೇಳಿ ಬಂದಿದೆ.
ಘಟನೆಯಲ್ಲಿ ಹಲವರಿಗೆ ಗಾಯವಾಗಿದೆ, ಗಾಯಾಳುಗಳಿಗೆ ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.