ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ವಿಧಿವಶರಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿರೋ ಅವ್ರು ಭಾರತದ 13 ನೇಯ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಪಂಜಾಬಿನ ಗಾಹ್ ನಲ್ಲಿ ಜನಿಸಿದ್ದ ಮನಮೋಹನ್ ಸಿಂಗ್, 2004 ರಿಂದ 2014 ರವರೆಗೆ ಹತ್ತು ವರ್ಷಗಳ ಕಾಲ್ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು.
ಬೆಳಗಾವಿ ನಾಳಿನ ಕಾರ್ಯಕ್ರಮ ರದ್ದು..!
ಇನ್ನು ಬೆಳಗಾವಿಯಲ್ಲಿ ನಾಳೆ ನಡೆಯಬೇಕಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ರದ್ದು ಮಾಡಲಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶರಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ. ಇನ್ನು, ಬೆಳಗಾವಿಯಲ್ಲಿರೋ AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಹಲವು ಮುಖಂಡರು ದೆಹಲಿಯತ್ತ ಪ್ರಯಾಣ ಬೆಳಸಿದ್ದಾರೆ.