ಮುಂಡಗೋಡಿನ ಅಂಗನವಾಡಿಯೊಂದರಲ್ಲಿ ಭಾರಿ ಅನಾಹುತ ಸಂಭವಿಸಿದೆ. ಅಂಗನವಾಡಿಯ ಬಳಿ ಮೂತ್ರ ವಿಸರ್ಜನೆಗೆ ತೆರಳಿದ್ದ, ನಾಲ್ಕು ವರ್ಷದ ಪುಟ್ಟ ಕಂದಮ್ಮನಿಗೆ ಹಾವು ಕಚ್ಚಿದೆ. ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಟ್ಟಣದ ಮಾರಿಕಾಂಬಾ ನಗರದ ಅಂಗನವಾಡಿಯಲ್ಲಿ ಘಟನೆ ನಡೆದಿದ್ದು, ಮಯೂರಿ ಸುರೇಶ್ ಕುಂಬ್ಳೆಪ್ಪನವರ(4) ಎಂಬುವ ಪುಟ್ಟ ಬಾಲಕಿಗೆ ಹಾವು ಕಚ್ಚಿದೆ ಎನ್ನಲಾಗಿದೆ. ಮೂತ್ರ ವಿಸರ್ಜನೆಗೆ ಅಂತಾ ಹೋಗಿದ್ದ ಬಾಲಕಿಯ ಕಾಲಿನಲ್ಲಿ ರಕ್ತಸ್ರಾವ ಕಂಡ ಅಂಗನವಾಡಿ ಸಿಬ್ಬಂದಿಗಳು ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ.
ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.