ಯಲ್ಲಾಪುರದ ಅರಬೈಲು ಘಟ್ಟದ ಗುಳ್ಳಾಪುರ ಬಳಿ ಭೀಕರ ಅಪಘಾತವಾಗಿದೆ. ತರಕಾರಿ ಸಾಗಿಸುತ್ತಿದ್ದ ಅಶೋಕ ಲೈಲ್ಯಾಂಡ್ ವಾಹನ ರಸ್ತೆಬದಿಯ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದಿದೆ. ಪರಿಣಾಮ 10 ಜನ ಸ್ಥಳದಲ್ಲೇ ಸಾವು ಕಂಡಿದ್ದಾರೆ, 15 ಜನರಿಗೆ ಗಾಯವಾಗಿದೆ. ಇದ್ರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಮೃತರೇಲ್ಲರೂ ಹಾವೇರಿ ಜಿಲ್ಲೆಯ ಸವಣೂರಿನವರು ಎನ್ನಲಾಗಿದ್ದು. ಕುಮಟಾಗೆ ತರಕಾರಿ ಸಾಗಿಸುತ್ತಿದ್ದರು ಎನ್ನಲಾಗಿದೆ. 15 ಗಾಯಾಳುಗಳನ್ನು ಆಸ್ಪತ್ರೆಗೆ ತವಾನಿಸಲಾಗಿದೆ. ಅದ್ರಲ್ಲಿ ಹಲವರ ಸ್ಥಿತಿ ಗಂಭಿರವಾಗಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಇದೆ ಎನ್ನಲಾಗಿದೆ.
ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.