ಅಂಕೋಲಾ: ಅನಾರೋಗ್ಯಕ್ಕೆ ಒಳಗಾಗಿದ್ದ ಹಾಡುಹಕ್ಕಿ ಪದ್ಮಶ್ರೀ‌ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ಅವರು ಇಂದು ನಿಧನರಾಗಿದ್ದಾರೆ.

ಅಂಕೋಲಾ ತಾಲೂಕಿನ ಬಡಿಗೇರಿ ಗ್ರಾಮದ ತಮ್ಮ ಮನೆಯಲ್ಲಿ ನಿಧನ ಹೊಂದಿದ ಹಾಡುಹಕ್ಕಿ ಸುಕ್ರಿ ಬೊಮ್ಮ ಗೌಡ ಅವರಿಗೆ 88 ವರ್ಷ ವಯಸ್ಸಾಗಿತ್ತು. ಇವರಿಗೆ ಪದ್ಮಶ್ರೀ, ನಾಡೋಜ, ರಾಜ್ಯೋತ್ಸವ, ಜಾನಪದ ಶ್ರೀ ಪ್ರಶಸ್ತಿ ಪಡೆದಿದ್ದು, 2017 ರಲ್ಲಿ ಪದ್ಮಶ್ರೀ ಪ್ರಶಸ್ತಿ ಲಭಿಸಿತ್ತು

ಜಾನಪದ‌ ಹಾಡುಗಳ ಮೂಲಕ ಸಮುದಾಯದ ಮಹಿಳೆಯರ ಪರಿಚಯಿಸುವ ಕಾರ್ಯ ನಿರ್ವಹಿಸಿದ್ದರು. ಅನೇಕ ಹೋರಾಟಗಳಲ್ಲಿ ಸಹ ಇವರು ಮುಂಚೂಣಿ ಯಲ್ಲಿ ಇರುತ್ತಿದ್ದರು..

ಜಾನಪದ ಕೋಗಿಲೆಯ ನಿಧನಕ್ಕೆ ಜಿಲ್ಲೆಯ ಗಣ್ಯರು ಕಂಬನಿ ಮಿಡಿದಿದ್ದಾರೆ.

error: Content is protected !!