ಮುಂಡಗೋಡಿನ ಶಿವಾಜಿ ಸರ್ಕಲ್ ನಲ್ಲಿ ಕಂಡೂ ಕೇಳರಿಯದ ಭಯಾನಕ ಘಟನೆ ನಡೆದು ಹೋಗಿದೆ. ಟಿಪ್ಪರ್ ಹಿಂಬದಿಯ ಗಾಲಿಗೆ ಸಿಲುಕಿದ ಪಾದಾಚಾರಿ ವ್ಯಕ್ತಿಯೋರ್ವನ ದೇಹ ಛಿದ್ರ ಛಿದ್ರಗೊಂಡಿದೆ. ಘಟನೆಯ ಭಯಾನಕತೆಗೆ ಜನ ಬೆಚ್ಚಿ ಬಿದ್ದಿದ್ದಾರೆ. ಆದ್ರೆ, ಹೀಗೆ ದಾರುಣ ಸಾವು ಕಂಡಿರೋ ವ್ಯಕ್ತಿ ಯಾರು..? ಎಲ್ಲಿಯವನು ಅನ್ನೋದು ಇನ್ನು ತಿಳಿದು ಬಂದಿಲ್ಲ..
ಅಂದಹಾಗೆ, ಸಂಜೆ ಶಿವಾಜಿ ಸರ್ಕಲ್ ನಲ್ಲಿ ಘಟನೆ ನಡೆದಿದೆ. ಟಿಪ್ಪರ್ ಹಿಂಬದಿಯ ಚಕ್ರಕ್ಕೆ ಸಿಲುಕಿರೋ ಪಾದಾಚಾರಿ ಸ್ಥಳದಲ್ಲೇ ಚಿದ್ರ ಚಿದ್ರಗೊಂಡಿದ್ದಾನೆ. ದೇಹದ ಬಹುತೇಕ ಭಾಗ ನುಜ್ಜು ಗುಜ್ಜಾಗಿದೆ. ಸ್ಥಳಕ್ಕೆ ಮುಂಡಗೋಡ ಪೊಲೀಸರು ಭೇಟಿ ನೀಡಿದ್ದಾರೆ.