ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಪಿಡಿಒ ಮಂಜುನಾಥ್ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಶುಕ್ರವಾರ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಅವರು, ಮಂಜುನಾಥ ಅವರಿಗೆ
ಫೆಬ್ರವರಿ 2025 ಮಾಹೆಯ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ ಪತ್ರ ನೀಡಿ, ಅಭಿನಂದಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕ ಕರೀಂ ಅಸದಿ, ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ್ ಉಪಸ್ಥಿತರಿದ್ದರು.