ಹುನಗುಂದದಲ್ಲಿ ರೇಣುಕಾಚಾರ್ಯರ ಜಯಂತಿ ಉತ್ಸವ..!

ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ವೀರಶೈವ ಧರ್ಮ ಸಂಸ್ಥಾಪಕ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಿಸಲಾಯಿತು.

2024-25 ಸಾಲಿನಯುಗಮಾನೋತ್ಸವ ಹಿನ್ನೆಲೆಯಲ್ಲಿ ಹುನಗುಂದ ಗ್ರಾಮದ ಮಂತ್ರವಾಡಿ ಮಠದ ಶ್ರೀ ರೇಣುಕ ಮಂದಿರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬ್ಯಾಹಟ್ಟಿಯ ಉಜ್ಜಯಿನಿ ಶಾಖಾ ಹಿರೇಮಠದ ಶ್ರೀ ಷ ಬ್ರ ಮರುಳ ಸಿದ್ಧ ಶಿವಾಚಾರ್ಯ ಮಹಾ ಸ್ವಾಮಿಗಳ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹುನಗುಂದ ಸರ್ವಧರ್ಮದ ಗುರು ಹಿರಿಯರು, ಜಂಗಮ ಸಮಾಜದ ಬಾಂಧವರು ಪಾಲ್ಗೊಂಡಿದ್ದರು.

error: Content is protected !!