ಹುಬ್ಬಳ್ಳಿ: ಪಕ್ಷ ವಿರೋಧಿ ಚಟುವಟಿಕೆ ಆರೋಪ ಹೊತ್ತ ಇಬ್ಬರು ಶಾಸಕರನ್ನು ಈ ತಿಂಗಳಾಂತ್ಯಕ್ಕೆ ಪಕ್ಷದಿಂದ ಉಚ್ಚಾಟನೆ ಮಾಡಲಾಗುವದು ಅಂತಾ
ಬಿಜೆಪಿ ಶಿಸ್ತು ಸಮಿತಿ ರಾಜ್ಯ ಅಧ್ಯಕ್ಷ ಲಿಂಗರಾಜ ಪಾಟೀಲ್ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯ ನಂತ್ರ ಎಸ್.ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ನಿರಂತರ ಪಕ್ಷ ದ್ರೋಹ ಮಾಡಿದ್ದಾರೆ. ಕಳೆದ ಲೋಕಸಭಾ ಮತ್ತು ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಇವರಿಬ್ಬರ ಬಗ್ಗೆ ಈಗಾಗಲೇ ಕೇಂದ್ರ ಶಿಸ್ತು ಸಮಿತಿ ಅಧ್ಯಕ್ಷರಿಗೆ ವರದಿ ಸಲ್ಲಿಸಲಾಗಿದೆ ಎಂದರು.
ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಕ್ಷೇತ್ರಕ್ಕೆ ತೆರಳಿ ವರದಿ ಸಿದ್ಧಪಡಿಸಿದ್ದೇನೆ. ಪಕ್ಷದ ಕಾರ್ಯಕರ್ತರ ಮತ್ತು ಅಲ್ಲಿನ ಮಂಡಳ ಅಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರಿಂದ ವರದಿ ಸಿದ್ದಪಡಿಸಿ ನೀಡಿದ್ದೇನೆ. ಅಲ್ಲದೇ ಇಬ್ಬರು ಶಾಸಕರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ವಿಡಿಯೋ ಮತ್ತು ಪೇಪರ್ ಕಟಿಂಗ್‌ಗಳನ್ನ ವರದಿಯ ಜೊತೆಗೆ ಸಲ್ಲಿಸಲಾಗಿದೆ. ಇಲ್ಲಿಯವರೆಗೂ ಎರಡ್ಮೂರು ಬಾರಿ ಕೇಂದ್ರಕ್ಕೆ ವರದಿ ನೀಡಲಾಗಿದೆ. ಹೀಗಾಗಿ ಈ ತಿಂಗಳಾಂತ್ಯಕ್ಕೆ ಇಬ್ಬರ ಶಾಸಕರ ಉಚ್ಚಾಟನೆ ಆಗುತ್ತದೆ ಎಂದರು.