ಹಾವೇರಿ; ಬೆಂಗಳೂರಿನಿಂದ ಹಾವೇರಿಗೆ ಕಾರಿನಲ್ಲಿ ಬರುತ್ತಿದ್ದ ವೇಳೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯವಾಗಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಹಿರಿಯೂರು ಬಳಿ ರೆಸ್ಟ್ ವೇಳೆ ದ್ವಿಚಕ್ರ ವಾಹನ ಸವಾರನೋರ್ವ ರುದ್ರಪ್ಪ ಲಮಾಣಿ ಅವರಿಗೆ ಡಿಕ್ಕಿ ಹೊಡೆದು ತಲೆಗೆ, ಮೂಗಿಗೆ ಗಾಯಗಳು ಆಗಿವೆ ಎಂದು ಲಮಾಣಿ ಅವರನ್ನು ದಾವಣಗೆರೆ ಎಸ್ ರಸ್ ಆಸ್ಪತ್ರೆಗೆ ಚಿಕಿತ್ಸೆ ಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.