ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಹಣ ನೀಡಲ್ಲ, ಬದಲಾಗಿ ಅಕ್ಕಿ ವಿತರಣೆೆ ; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ

ಕಾರವಾರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (ಆಃಖಿ) ಮುಖಾಂತರ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯ ಬದಲಾಗಿ ಫೆಬ್ರವರಿ-2025 ರ ಮಾಹೆಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ 05 ಕೆ.ಜಿ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ .ಕೆ.ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.

ಅದರಂತೆ ಫೆಬ್ರವರಿ-2025 ಮಾಹೆಯಲ್ಲಿ ವಿತರಿಸಬೇಕಾದ ಅಕ್ಕಿ ಪ್ರಮಾಣವನ್ನು ಸೇರಿ ಮಾರ್ಚ್-2025 ಮಾಹೆಯಲ್ಲಿ ಈ ಕೆಳಗಿನ ಪ್ರಮಾಣದಂತೆ ವಿತರಿಸಲಾಗುವುದು.

ಮಾರ್ಚ್ ಮಾಹೆ 1ನೇ ತಾರೀಖಿನಿಂದ ತಿಂಗಳ ಕೊನೆಯವರೆಗೆ ಬೆಳಿಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೆ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ-ಕೆವೈಸಿ ಮಾಡುವ ಹಾಗೂ ಪಡಿತರ ವಿತರಣೆ ಕಾರ್ಯ ಜರುಗಲಿದ್ದು, ಪಡಿತರ ಚೀಟಿದಾರರು ಬಯೋ ನೀಡಿದ ತಕ್ಷಣವೇ ಪಡಿತರ ಪಡೆಯಬೇಕು. ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಯಾವುದೇ ಶುಲ್ಕ ನೀಡುವಂತಿಲ್ಲ.

ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವುದು. ಹಾಗೂ ಕಾಳಸಂತೆಯಲ್ಲಿ ಅನಧಿಕೃತವಾಗಿ ಆಹಾರಧಾನ್ಯವನ್ನು ದಾಸ್ತಾನು/ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ರಡಿ ಕ್ರಮ ಜರುಗಿಸಲಾಗುವುದು.

ಪಡಿತರ ವಿತರಣೆ ಕುರಿತು ಏನಾದರೂ ದೂರುಗಳು ಇದ್ದಲ್ಲಿ ಸಹಾಯವಾಣಿ ಸಂಖ್ಯೆ 1967 ಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

error: Content is protected !!