ಮುಂಡಗೋಡಿನಲ್ಲಿ SSLC ಪರೀಕ್ಣೆ ಬರೆದಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ಕೋಣೆಯಲ್ಲೇ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅರಹನ್ ಬಾಹುಬಲಿ ಚಿವಟೆ(16), ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದಾನೆ. ಈತ ಮುಂಡಗೋಡಿನ ಖಾಸಗಿ ಸಂಸ್ಥೆಯಲ್ಲಿ CBSE ವ್ಯಾಸಂಗ್ ಮಾಡುತ್ತಿದ್ದ. ಕಳೆದ ವಾರವಷ್ಟೇ SSLC ಪರೀಕ್ಷೆ ಬರೆದಿದ್ದ. ಆದ್ರೆ, ಪರೀಕ್ಣೆಯಲ್ಲಿ ಉತ್ತೀರ್ಣ ಆಗಲ್ಲವೇನೋ ಎಂಬ ಭಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಅಂತಾ ಅನುಮಾನಿಸಲಾಗಿದೆ.

ಇಂದು ಬೆಳಗಿನ 8 ಗಂಟೆಯ ವೇಳೆ, ಮನೆಯ ಕೋಣೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣವೇ ತಂದೆ ತಾಯಿ ನೋಡಿ, ಕೆಳಗಿಳಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದ್ರೆ, ಅಷ್ಟೊತ್ತಿಗಾಗಲೇ ವಿದ್ಯಾರ್ಥಿಯ ಅರಹನ್ ನ ಪ್ರಾಣಪಕ್ಷಿ ಹಾರಿಹೋಗಿತ್ತು ಎನ್ನಲಾಗಿದೆ.

ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
