ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಬಿಜೆಪಿ ಶಿಸ್ತು ಸಮಿತಿ 6 ವರ್ಷಗಳ ಕಾಲ ಉಚ್ಚಾಟನೆ ಮಾಡುತ್ತಿದ್ದಂತೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಸ್ಪಷ್ಟನೆ ಕೊಟ್ಟಿದ್ದಾರೆ.

ನನ್ನ ಮೇಲೆ ನನ್ನ ಪೂಜ್ಯ ತಂದೆಯ ಮೇಲೆ ಮಾತಾಡಿದರು ಸಹ ನಾನು ಕೇಂದ್ರದ ವರಿಷ್ಟರಿಗೆ ಬಸನಗೌಡ ಪಾಟೀಲ ಯತ್ನಾಳರ ಮೇಲೆ ದೂರು ಕೊಟ್ಟಿಲ್ಲ ಎಂದು ಹೇಳಿದ್ದಾರೆ.

ವಿಜಯೇಂದ್ರ ಹೇಳಿದ್ದಿಷ್ಟು..!
ಭಾರತೀಯ ಜನತಾ ಪಾರ್ಟಿ, ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆಯನ್ನು ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ. ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ @BasanagoudaBJPರವರ ವಿರುದ್ದದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ.

ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ. ಪೂಜ್ಯ ತಂದೆ ಯಡಿಯೂರಪ್ಪನವರು ಎಲ್ಲರನ್ನೂ ಸಮಚಿತ್ತ ಭಾವದಿಂದ ನೋಡಿ, ಪಕ್ಷವನ್ನು ಕುಟುಂಬದಂತೆ ಬೆಳೆಸಿದ ಮಾದರಿಯಲ್ಲಿಯೇ ನಡೆಯಬೇಕೆಂಬ ಸಂಕಲ್ಪ ಹೊತ್ತು, ಸಂಘದ ಹಿರಿಯರು ಮತ್ತು ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ.

error: Content is protected !!