ಮುಂಡಗೋಡ ತಾಲೂಕಿನ ಮಳಗಿ ಬಳಿ ಚಲಿಸುತ್ತಿದ್ದ KSRTC ಬಸ್ ಮೇಲೆ ಮರ ಬಿದ್ದಿದೆ. ಪರಿಣಾಮ್ ಬಸ್ ಜಖಂ ಗೊಂಡಿದ್ದು, ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ, ಹುಬ್ಬಳ್ಳಿ ಶಿರಸಿ ರಸ್ತೆ ಸಂಚಾರ ಸ್ಥಗಿತವಾಗಿತ್ತು.
ಮಳಗಿ ಭಾಗದಲ್ಲಿ ಸಂಜೆಯಿಂದ ಭಾರಿ ಪ್ರಮಾಣದ ಗಾಳಿ ಬೀಸಿದೆ. ಮಳೆಗಾಳಿಯ ಪರಿಣಾಮ ರಸ್ತೆ ಬದಿಯ ಮರ ಉರುಳಿ ಬಿದ್ದಿದೆ. ಅದೇ ವೇಳೆ ರಸ್ತೆ ಮೇಲೆ ಸಂಚರಿಸುತ್ತಿದ್ದ KSRTC ಬಸ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಪದರಯಾಣಿಕರಿಗೆ ಯಾವುದೇ ಪ್ತಾಣಾಪಾಯವಾಗಿಲ್ಲ.
ನಂತರ ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ರಸ್ತೆ ಮೇಲಿನ ಮರ ತೆರವು ಮಾಡಿದ್ದಾರೆ. ಸುಗಮ ಸಂಚಾರಕ್ಕೆ ಅನುವು ಮಾಡಿದ್ದಾರೆ.