ಮುಂಡಗೋಡ: ಶಾಸಕ ಶಿವರಾಮ ಹೆಬ್ಬಾರ್ ಇಂದು ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ರು. ಬಾಚಣಕಿ ಗ್ರಾಮದಲ್ಲಿ ಮನುವಿಕಾಸ ಸಂಸ್ಥೆಯ ವತಿಯಿಂದ ಕೆರೆಯ ಹೂಳೆತ್ತುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಪೂಜೆ ಸಲ್ಲಿಸುವ ಮೂಲಕ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ನಂತರ ಶಾಸಕರು ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಬ್ಲಾಕ್ ಪಬ್ಲಿಕ್ ಹೆಲ್ತ್ ಯುನಿಟ್ ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಬ್ಲಾಕ್ ಪಬ್ಲಿಕ್ ಹೆಲ್ತ್ ಯುನಿಟ್ ನಿರ್ಮಾಣ ಕಾಮಗಾರಿ ಭೂಮಿ ಪೂಜೆಯನ್ನು ಸಲ್ಲಿಸಿ ಚಾಲನೆ ನೀಡಿದ ಶಾಸಕರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

error: Content is protected !!