ಮುಂಡಗೋಡ: ಅರಣ್ಯ ಇಲಾಖೆಯವರು ಉದ್ಯೋಗ ಖಾತ್ರಿ ಯೋಜನೆಯನ್ನು ಹೆಚ್ಚು ಸದ್ಭಳಕೆ ಮಾಡಿಕೊಳ್ಳುವ ಮೂಲಕ ಅರಣ್ಯ ಬೆಳಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಈಶ್ವರ ಖಾಂದೂ ಶನಿವಾರ ಹೇಳಿದ್ರು..
ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಅನುಕೂಲತೆಯಿದೆ ಆದರೆ ಅರಣ್ಯ ಇಲಾಖೆಯವರು ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಸದ್ಭಳಕೆ ಮಾಡಿಕೊಳ್ಳುತ್ತಿಲ್ಲ ಮುಂದಿನ ದಿನಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಅರಣ್ಯ ಪ್ರದೇಶದಲ್ಲಿ ಉತ್ತಮ ಕಾಮಗಾರಿ ಕೈಗೊಳ್ಳಲು ಅರಣ್ಯಾಧಿಕಾರಿಗಳಿಗೆ ಸೂಚಿಸಿದರು
ಅಲ್ದೆ, ತಾಲೂಕಿನಲ್ಲಿರುವ ಹದಿನಾರು ಗ್ರಾಮ ಪಂಚಾಯಿತಿಯವರು ಉದ್ಯೋಗ ಖಾತ್ರಿ ಯೋಜನೆಯನ್ನು ಸರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಕಾರ್ಮಿಕರಿಗೆ ಕೆಲಸ ನೀಡಿದ್ದು ಮುಂದಿನ ದಿನಗಳಲ್ಲಿಯೂ ಇದೆ ರೀತಿಯಾಗಿ ಕಾಮಗಾರಿ ಕೈಗೊಳ್ಳಲು ಸೂಚಿಸಿದರು.
ಅಂಗನವಾಡಿಗೆ ಭೇಟಿ..!
ಆರಂಭದಲ್ಲಿ ಮೈನಳ್ಳಿ ಗ್ರಾಮ ಪಂಚಾಯಿತಿ ಹಾಗೂ ಸರ್ಕಾರಿ ಶಾಲೆ, ಅಂಗನವಾಡಿ ಕೆಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಗೂ ಅಂಗನವಾಡಿ ಮಕ್ಕಳೊಂದಿಗೆ ಕೆಲ ಸಮಯ ಕಳೆದರು ನಂತರ ಬಾಚಣಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಶಿಣಗೇರಿ ಆರೋಗ್ಯ ಕೆಂದ್ರ ಹಾಗೂ ನ್ಯಾಸರ್ಗಿ ಜಲಾಶಯದ ಬಳಿ ನಿರ್ಮಾಣ ಗೋಳ್ಳುತ್ತಿರುವ ಶುದ್ಧ ಕುಡಿಯುವ ನೀರು ಸರಬರಾಜು ಘಟಕ ಕಾಮಗಾರಿ ವಿಕ್ಷಣೆ ನಡೆಸಿದರು.
ಈ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಟಿ.ವೈ.ದಾಸನಕೊಪ್ಪ, ಸೋಮಣ್ಣ ಛಬ್ಬಿ, ಪಂಚಾಯತ್ ರಾಜ್ ಇಂಜಿನಿಯರ್ ಪ್ರದೀಪ ಭಟ್, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಇಂಜಿನಿಯರ್ ರಾಜೇಶ್ವರಿ ಕದಂ ಸೇರಿದಂತೆ ಮುಂತಾದವರಿದ್ದರು.