ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!

ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. KSRTC ಬಸ್ ನಿಲ್ದಾಣದ ಎದುರಲ್ಲೇ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಓರ್ವ ಆರೋಪಿ ವಶಕ್ಕೆ ಸಿಕ್ಕಿದ್ದು, ಮೂವರು ಎಸ್ಕೇಪ್ ಆಗಿದ್ದಾರೆ‌.

ಅಂದಹಾಗೆ, ಮುಂಡಗೋಡ KSRTC ಬಸ್ ನಿಲ್ದಾಣದ ಎದುರು,ಸಾರ್ವಜನಿಕ ಸ್ಥಳದಲ್ಲಿ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಹೀಗಿದ್ದಾಗ, ಖಚಿತ ಮಾಹಿತಿ ಪಡೆದ ಪೊಲೀಸ್ರು ದಾಳಿ ನಡೆಸಿದ್ದಾರೆ. ಪರಿಣಾಮ, ಮುಂಡಗೋಡ ಅಂಬೇಡ್ಕರ್ ಓಣಿಯ ಮಂಜುನಾಥ
ನಾಗಪ್ಪ ಕೊರವರ(33), ಆನಂದನಗರದ
ವೆಂಕಟೇಶ ಅಶೋಕ ಅರಿವಾಣ(32) ಗದಗ ಮೂಲದ ಮಂಜುನಾಥ ಬೈಲಪ್ಪ ಆಸಂಗಿ(30) ಹಾಗೂ ಮುಂಡಗೋಡ ತಾಲೂಕಿನ ಚಿಗಳ್ಳಿಯ ಹರೀಶ ದೇವಿಂದ್ರಪ್ಪ ಬಾಳೆಮ್ಮನವರ(28) ಎಂಬುವವರೇ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪಿಗಳಾಗಿದ್ದು, ಇದ್ರಲ್ಲಿ ಮುಂಡಗೋಡ ಅಂಬೇಡ್ಕರ್ ಓಣಿಯ ಮಂಜುನಾಥ ನಾಗಪ್ಪ ಕೊರವರ(33) ಮಾತ್ರ ಸಿಕ್ಕಿದ್ದು, ಉಳಿದವರು ಪರಾರಿಯಾಗಿದ್ದಾರೆ ಅಂತಾ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಿಕ್ಕ ಆರೋಪಿಯನ್ನು ಜಪ್ತಿ ಮಾಡಿದಾಗ ನಗದು ಹಣ 2300/-ರೂ, ಲಾವಾ ಕಂಪನಿಯ ಕೀಪ್ಯಾಡ್ ಮೋಬೈಲ್ ಮತ್ತು ಕ್ರಿಕೇಟ್ ಬೆಟ್ಟಿಂಗ್ ಬರೆದಿರುವ ನೋಟಬುಕ್-01 ಹಾಗೂ ಪೆನ್ನುಗಳನ್ನು ಜಪ್ತುಪಡಿಸಿಕೊಂಡು ಸದರಿಯವರ ಮೇಲೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಉತ್ತರ ಕನ್ನಡ ಎಸ್ಪಿ ಎಮ್, ನಾರಾಯಣ್, ASP ಕೃಷ್ಣಮೂರ್ತಿ ಜಿ., ಜಗದೀಶ ನಾಯ್ಕ
ಶಿರಸಿ DySp ಗಣೇಶ ಕೆ, ಎಲ್. ಮಾರ್ಗದರ್ಶನದಲ್ಲಿ ಮುಂಡಗೋಡ CPI ರಂಗನಾಥ ನೀಲಮ್ಮನವರ ನೇತೃತ್ವದಲ್ಲಿ, ಸಿಬ್ಬಂದಿಗಳಾದ ಮಹಾಂತೇಶ ಮುಧೋಳ, ಅನ್ವರ ಬಮ್ಮಿಗಟ್ಟಿ, ನಾಗಪ್ಪ ಎಮ್ ಇವರು ಆರೋಪಿತರನ್ನು ದಸ್ತಗಿರಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಇರುತ್ತದೆ. ಸದರಿ ಪ್ರಕರಣವನ್ನು ಪತ್ತೆ ಮಾಡಿದ ಎಲ್ಲಾ
ಅಧಿಕಾರಿ,ಸಿಬ್ಬಂದಿಗಳಿಗೆ ಎಸ್ಪಿ ಸಾಹೇಬ್ರು
ಶ್ಲಾಘಿಸಿ, ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ.

error: Content is protected !!