ಕಾರವಾರ: ಜಿಲ್ಲಾಡಳಿತ ಉತ್ತರ ಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ಪ್ರವಾಸೋದ್ಯಮ ಇಲಾಖೆ ಹಾಗೂ ಬನವಾಸಿ ಅಭಿವೃದ್ಧಿ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭವು ಏ.12 ಮತ್ತು 13 ರಂದು ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆಯಲಿದೆ.
ಕದಂಬೋತ್ಸವ-2025 ರ ಉದ್ಘಾಟನೆಯನ್ನು,ಏ.12 ರಂದು ಸಂಜೆ 5 ಗಂಟೆಗೆ ಬನವಾಸಿಯ ಮಯೂರ ವರ್ಮ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಯಲ್ಲಾಪುರ- ಮುಂಡಗೋಡ ಶಾಸಕ ಶಿವರಾಮ ಹೆಬ್ಬಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವ ಎಚ್.ಕೆ. ಪಾಟೀಲ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ಸಂಗಪ್ಪ ತಂಗಡಗಿ, ಕಂದಾಯ ಸಚಿವ ಕೃಷ್ಣ ಭೈರೇಗೌಡ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ, ಕರ್ನಾಟಕ ಮಾರ್ಕೇಟಿಂಗ್ ಕನ್ಸಲ್ಟೆಂಟ ಅಂಡ್ ಏಜೆನ್ಸಿಸ್ ಅಧ್ಯಕ್ಷ ಸತೀಶ ಕೆ. ಸೈಲ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ದಿನಕರ ಕೆ. ಶೆಟ್ಟಿ, ಭೀಮಣ್ಣ ಟಿ. ನಾಯ್ಕ, ವಿಧಾನ ಪರಿಷತ್ ಶಾಸಕರಾದ ಎಸ್. ವಿ.ಸಂಕನೂರು, ಶಾಂತಾರಾಮ ಬುಡ್ನ ಸಿದ್ದಿ, ಗಣಪತಿ ಡಿ.ಉಳ್ವೇಕರ, ಬನವಾಸಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಬಿಬಿ ಆಯಿಷಾ ಖಾಸಿಂ ಖಾನ್, ಗುಡ್ನಾಪುರ ಗ್ರಾಮ ಪಂಚಾಯತಿ ಅಧ್ಯಕ್ಷೆ ನಿರ್ಮಲಾ ಸಂತೋಷ ನಾಯ್ಕ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ 2024-25 ನೇ ಸಾಲಿನ ಪಂಪ ಪ್ರಶಸ್ತಿಯನ್ನು ಹಂಪಿ, ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತಿ ಕುಲಪತಿ ಡಾ. ಬಿ.ಎ. ವಿವೇಕ ರೈ ಅವರಿಗೆ ಪ್ರದಾನ ಮಾಡಲಾಗುವುದು.