ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26 ನೇ ಸಾಲಿಗೆ ಕುಸ್ತಿ (ಬಾಲಕರು/ಬಾಲಕಿಯರು),ಅರ್ಚರಿ (ಬಾಲಕರು) ಫೆನ್ಸಿಂಗ್(ಬಾಲಕರು), ಬಾಕ್ಸಿಂಗ್ (ಬಾಲಕರು/ಬಾಲಕಿಯರು) ಕ್ರೀಡೆಗಳಿಗೆ ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪರಿಶಿಷ್ಟ ಪಂಗಡದ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಏ.14 ರಂದು ಯಲ್ಲಾಪುರ ತಾಲೂಕು ಕ್ರೀಡಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಸಲಾಗಿದೆ.
ಭಾಗವಹಿಸುವ ಪರಿಶಿಷ್ಟ ಪಂಗಡದ ಕ್ರೀಡಾಪಟುಗಳು 2025-26 ನೇ ಸಾಲಿಗೆ 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ ಗೆ ಅರ್ಹತೆ ಪಡೆದಿರಬೇಕು ಜೂನ್ 1 ಕ್ಕೆ 14 ವರ್ಷ(8 ನೇ ತರಗತಿ)ಮತ್ತು (ಪ್ರಥಮ ಪಿ.ಯು.ಸಿ) ಮೀರಿರಬಾರದು. ಜನನ ಪ್ರಮಾಣ ಪತ್ರ, ವ್ಯಾಸಂಗ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್‌ಪೋಟ್ ಸೈಜ್ ಫೋಟೋ ಕಡ್ಡಾಯವಾಗಿ ತರಬೇಕು.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನಾಯ್ಕ ಮೊ.ಸಂ:78991404699, ಕುಸ್ತಿ ತರಬೇತುದಾರರಾದ ಶಿವಾನಂದ ಆರ್ ಮೊ.ಸಂ:7019565606, ತುಕರಾಮ ಗೌಡ ಮೊ.ಸಂ: 9945489193, ಅರ್ಚರಿ ತರಬೇತಿದಾರ ರಾಘು ಮೊ.ಸಂ:7892002795, ಫೆನ್ಸಿಂಗ್ ಕುಸ್ತಿ ತರಬೇತುದಾರ ವಿವೇಕ ಮೊ.ಸಂ: 9809684102, ಬಾಕ್ಸಿಂಗ್ ತರಬೇತುದಾರ ಧನ್‌ಸಂಜಯ ಮೊ.ಸಂ:8892171004 ಕ್ಕೆ ಸಂಪರ್ಕಿಸುವAತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.