ಕಾರವಾರ : ಕಾರವಾರ ನಗರಸಭೆಯ ಮಾಜಿ ಸದಸ್ಯ ಸತೀಶ್ ಕೊಳಂಕರನ್ನು ಭೀಕರ ಹತ್ಯೆ ಮಾಡಲಾಗಿದೆ. ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ, ಬಿಎಸ್ ಎನ್ ಎಲ್ ಕಚೇರಿ ಸಮೀಪ ಅಪರಿಚಿತ ವ್ಯಕ್ತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಹೀಗಾಗಿ ಇಡೀ ಕಾರವಾರ ನಗರ ಬೆಚ್ಚಿ ಬಿದ್ದಿದೆ.
ರವಿವಾರ ಬೆಳಿಗ್ಗೆ ಸ್ವಲ್ಪ ಹೊತ್ತಿನ ಮುಂಚೆ ಈ ಕೊಲೆ ನಡೆದಿದ್ದು, ಆರೋಪಿಗಳ ಸೆರೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಬೆಳ್ಳಂಬೆಳಿಗ್ಗೆ ನಡೆದ ಈ ಕೊಲೆಯಿಂದ ಕಾರವಾರಿಗರು ಬೆಚ್ಚಿ ಬಿದ್ದಿದ್ದಾರೆ. ಸ್ಕೂಟಿಯಲ್ಲಿ ಬಂದ ವ್ಯಕ್ತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆಂದು ಜನ ಮಾತಾಡಿ ಕೊಳ್ಳುತ್ತಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸತೀಶ್ ಕೊಳಂಕರ್ ನನ್ನು ಪೊಲೀಸರು, ಕಾರವಾರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸಾಗಿಸಿದ್ದಾರೆ.