ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್  ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!

ಬೆಂಗಳೂರು : ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌ ಅವರನ್ನ ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರು ನಗರದ ಎಚ್‌ಎಸ್‌ಆ‌ರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹತ್ಯೆ ನಡೆದಿದೆ. ಈ ಹತ್ಯೆಯನ್ನು ಅವರ ಪತ್ನಿಯೇ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಅವರ ಶವವನ್ನು ಮನೆಯಲ್ಲಿ ಪತ್ತೆ ಹಚ್ಚಲಾಗಿದೆ ಮತ್ತು ಮನೆ ತುಂಬಾ ರಕ್ತಸಿಕ್ತವಾದ ಸ್ಥಿತಿಯಲ್ಲಿ ಕಂಡುಬಂದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಈಗಾಗಲೆ ಅವರ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

1981ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಓಂ ಪ್ರಕಾಶ್ (68) ಬೆಂಗಳೂರು ನಗರದ ಎಚ್‌ಎಸ್‌ಆ‌ರ್ ಲೇಔಟ್‌ನಲ್ಲಿ ವಾಸಿಸುತ್ತಿದ್ದರು. 2015ರಲ್ಲಿ ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿ ಸೇವೆ ಸಲ್ಲಿಸಿದ್ದ ಓಂ ಪ್ರಕಾಶ್ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಸೆಂಟ್ ಜಾನ್ ಆಸ್ಪತ್ರೆಗೆ ಕಳಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ

error: Content is protected !!