ಮುಂಡಗೋಡ: ಶಾಸಕ ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ ಮುಂಡಗೋಡ ತಾಲೂಕಾ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಾಳೆ ಮಂಗಳವಾರ ದಿ. 22 ರಂದು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ ಅಂತಾ ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ವೈ. ದಾಸನಕೊಪ್ಪ ಮಾಹಿತಿ ನೀಡಿದ್ದಾರೆ.
ಮಂಗಳವಾರ ಬೆಳಿಗ್ಗೆ ಮುಂಡಗೋಡಿನ ತಾಲೂಕಾ ಪಂಚಾಯತಿ ಸಭಾಭವನದಲ್ಲಿ ಸಭೆ ನಡೆಯಲಿದ್ದು, ಶಾಸಕ ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಲಿದ್ದಾರೆ ಅಂತಾ ಅವ್ರು ಮಾಹಿತಿ ನೀಡಿದ್ದಾರೆ.