ಮುಂಡಗೋಡ ಸಮೀಪದ ಕರಗಿನಕೊಪ್ಪ ಬಳಿ ಬೈಕ್ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರಗೆ ರವಾನಿಸಲಾಗಿದೆ.
ತಾಲೂಕಿನ ಮೂಡಸಾಲಿ ಗ್ರಾಮದ ಜಗದೀಶ ಪಕ್ಕೀರಪ್ಪ ಪಾಟೀಲ್ (52) ಎಂಬುವ ಬೈಕ್ ಸವಾರನೇ ಗಂಭೀರ ಗಾಯಗೊಂಡಿದ್ದಾನೆ. ಈತ ಮುಂಡಗೋಡಿನಿಂದ ಮೂಡಸಾಲಿಗೆ ಮತ್ತೋರ್ವ ವ್ಯಕ್ತಿ ಕೇದಾರಲಿಂಗ್ ಹನ್ಮಂತಪ್ಪ ಬೆಡಸಗಾವ್ ಎಂಬುವವರ ಜೊತೆ ಬೈಕ್ ಮೇಲೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಹೀಗಾಗಿ, ಮತ್ತೋರ್ವನಿಗೂ ಸಣ್ಣಪುಟ್ಟ ಗಾಯವಾಗಿದೆ. ಇದೇ ವೇಳೆ ವಕೀಲ ಗುಡ್ಡಪ್ಪ ಕಾತೂರ ಅದೇ ಮಾರ್ಗದಲ್ಲಿ ಬರುತ್ತಿದ್ದಾಗ ಗಾಯಾಳುಗಳನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ತಮ್ಮದೇ ಕಾರಿನಲ್ಲಿ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ.
ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆಸದ್ಯ ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಗೆ ಸಾಗಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.