ಕಾರವಾರ: ನ್ಯಾಯ ಮೂರ್ತಿ ಹೆಚ್.ಎನ್ ನಾಗಮೋಹನದಾಸ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ- 2025 ಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾದ್ಯಂತ ಮೇ.5 ರಿಂದ ಪರಿಶಿಷ್ಟ ಜಾತಿ ಸಮುದಾಯದ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಂಗ್ರಹಿಸಲು ಮನೆ ಮನೆ ಸಮೀಕ್ಷೆ ಕಾರ್ಯ ಹಮ್ಮಿಕೊಳ್ಳಲಾಗಿದೆ.
ಈ ಸಮೀಕ್ಷೆ ಕಾರ್ಯಕ್ಕೆ ಪ್ರತಿ ಮತಗಟ್ಟೆಗೆ ಒಬ್ಬರಂತೆ ಗಣತಿದಾರರು, ಪ್ರತಿ 10 ಗಣತಿದಾರರಿಗೆ ಒರ್ವ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಮೇ.5 ರಿಂದ 17 ವರೆಗೆ ಗಣತಿದಾರರು ಮನೆ ಮನೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದು, ಮೇ.19 ರಿಂದ 21 ವರೆಗೆ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ನಡೆಯಲಿದೆ.
ಗಣತಿದಾರರು ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಗಳು ತಮ್ಮ ಆಧಾರ ಕಾರ್ಡ್, ಪಡಿತರ ಚೀಟಿ, ಮೊಬೈಲ್ ನಂಬರ್ ನೀಡಿ ಗಣತಿ ಕಾರ್ಯಕ್ಕೆ ಸಹಕರಿಸಬೇಕು. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ/ವಿವರಗಳಿಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಕಂಟ್ರೋಲ್ ರೂಂ ಮತ್ತು ಸಹಾಯವಾಣಿ ತೆರೆಯಲಾಗಿದ್ದು 08382-229857, 9483511015 ನ್ನು ಹಾಗೂ ರಾಜ್ಯ ಮಟ್ಟದ ಸಹಾಯವಾಣಿ ಸಂ: 080-22634300 ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.